alex Certify ಶಿಕ್ಷಕ ಹುದ್ದೆ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ: ಇಂದು 15 ಸಾವಿರ ಪದವೀಧರ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ: ಇಂದು 15 ಸಾವಿರ ಪದವೀಧರ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಸರ್ಕಾರಿ ಶಾಲೆ ಪದವೀಧರ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ.

ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಸರ್ಕಾರಿ ಶಾಲೆಗಳ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಸಚಿವರು ಶುಕ್ರವಾರ ಬಿಡುಗಡೆ ಮಾಡಲಿದ್ದಾರೆ.

ಶುಕ್ರವಾರ ಸಂಜೆ 5:30ಕ್ಕೆ ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯಲ್ಲಿ ಸಚಿವರು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡುವರು. ನಂತರ ಆಕ್ಷೇಪಣೆ ಆಹ್ವಾನಿಸಿ ಬಳಿಕ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...