ಬೆಂಗಳೂರು: ಶಿಕ್ಷಕರ ಮರು ಹೊಂದಾಣಿಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರೌಢಶಾಲೆ ಶಿಕ್ಷಕರ ಹುದ್ದೆಗಳ ಮರು ಹೊಂದಾಣಿಕೆ ನಂತರ ಹುದ್ದೆಗಳನ್ನು ನಿಗದಿಪಡಿಸಿ ಮಂಜೂರು ಮಾಡಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ರಾಜ್ಯದ 4821 ಶಾಲೆಗಳಲ್ಲಿ 43,353 ಮಂಜೂರಾದ ಹುದ್ದೆಗಳು ಇವೆ ಎಂದು ಮಾಹಿತಿ ಪ್ರಕಟಿಸಲಾಗಿದೆ. ಇದರ ಅನ್ವಯ 70 ವಿದ್ಯಾರ್ಥಿಗಳಿಗೆ ಒಂದು ವಿಭಾಗದಂತೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ಆದರ್ಶ ಶಾಲೆಗಳಲ್ಲಿ 40 ವಿದ್ಯಾರ್ಥಿಗಳಿಗೆ ಒಂದು ವಿಭಾಗದ ಆಧಾರದ ಮೇಲೆ ವಿಂಗಡಣೆ ಮಾಡಲಾಗಿದೆ.
ಐದು ಅಥವಾ ಐದಕ್ಕಿಂತ ಹೆಚ್ಚು ವಿಭಾಗಗಳು ಇದ್ದಲ್ಲಿ ಮುಖ್ಯ ಶಿಕ್ಷಕರನ್ನು ಹೊರತುಪಡಿಸಿ ಶಿಕ್ಷಕರ ಹುದ್ದೆಗಳನ್ನು ಒದಗಿಸಲಾಗಿದೆ. ಈ ಮಂಜೂರಾದ ಹುದ್ದೆಗಳ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ಶಿಕ್ಷಕರ ವರ್ಗಾವಣೆ ವೇಳೆ ಮರು ಹೊಂದಾಣಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಲಾಗಿದೆ.