ಬೆಂಗಳೂರು: ರಾಜ್ಯದಲ್ಲಿ ಹಂತಹಂತವಾಗಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ವಿಧಾನ ಪರಿಷತ್ ನಲ್ಲಿ ಭರವಸೆ ನೀಡಿದ್ದಾರೆ.
ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಅರುಣ ಶಹಾಪುರ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕೊರೋನಾದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಹಾಗಾಗಿ ಹಂತಹಂತವಾಗಿ ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರ, ಉಪನ್ಯಾಸಕರ ಹುದ್ದೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಗ್ರಾಮೀಣ ಭಾಗದ ಅನುದಾನಿತ ಶಾಲೆಗಳಲ್ಲಿ ಸಮಸ್ಯೆಯಾಗುತ್ತಿದೆ. 5000 ಹುದ್ದೆಗಳ ನೇಮಕಾತಿ ಸುಲಭವಲ್ಲ. ಹಂತಹಂತವಾಗಿ ಗ್ರಾಮೀಣ ಭಾಗದ ಅನುದಾನಿತ ಶಾಲೆಗಳ ಹುದ್ದೆಗಳಿಗೆ ನೇಮಕಾತಿ ಅನುಮೋದನೆ ನೀಡಲಾಗುವುದು. 2021 -22 ನೇ ಸಾಲಿಗೆ 801 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಕಳೆದ ವರ್ಷ 1819 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿತ್ತು ಎಂದು ಹೇಳಿದ್ದಾರೆ.