ಬೆಂಗಳೂರು: ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಸೇವಾ ಸೌಲಭ್ಯವನ್ನು ಪಡೆಯಲು ಇನ್ನು ಮುಂದೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಿದೆ.
ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿ ಆಗಸ್ಟ್ 2 ರಿಂದ ಸೌಲಭ್ಯ ಪಡೆದುಕೊಳ್ಳಲು ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಭೌತಿಕವಾಗಿ ಸಲ್ಲಿಕೆಯಾದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲವೆಂದು ಹೇಳಲಾಗಿದೆ.
ಶಿಕ್ಷಣ ಇಲಾಖೆಯಲ್ಲಿನ 2.5 ಲಕ್ಷ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನುಕೂಲವಾಗುವಂತೆ ಶಿಕ್ಷಕ ಮಿತ್ರ ಮೊಬೈಲ್ ಆಪ್ ರಚಿಸಲಾಗಿದ್ದು, ಸೌಲಭ್ಯಗಳಿಗಾಗಿಳ ಆಪ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಪಿಎಫ್ ಅಡ್ವಾನ್ಸ್, ರಜೆ ಅರ್ಜಿ, ವೇತನ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಪಡೆಯಲು ಮೊಬೈಲ್ ಆಪ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಶಿಕ್ಷಕರು ಮತ್ತು ಸಿಬ್ಬಂದಿಗೆ ಅನುಕೂಲವಾಗುವಂತೆ ಆನ್ಲೈನ್ ಸೇವಾ ಸೌಲಭ್ಯದ ಕುರಿತು ಕೈಪಿಡಿ ತರಲಾಗಿದೆ ಎಂದು ಹೇಳಲಾಗಿದೆ.