ರಾಜ್ಯದಲ್ಲಿ ಪದವೀಧರ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಹೊಸಬರ ನೇಮಕಕ್ಕೆ ಮೊದಲು ಸೇವಾನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇಕೆಂದು ಒತಾಯಿಸಲಾಗಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆರರಿಂದ ಎಂಟನೇ ತರಗತಿಗೆ ಪಾಠ ಮಾಡಲು 15,000 ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಒಂದರಿಂದ ಏಳನೇ ತರಗತಿಗೆ ಪಾಠ ಮಾಡುತ್ತಿರುವ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಸೇವಾ ಜೇಷ್ಠತೆ ಮತ್ತು ಪದವಿ ಅರ್ಹತೆ ಮೇಲೆ ಆರರಿಂದ ಎಂಟನೇ ತರಗತಿಗೆ ಪಾಠ ಮಾಡಲು ಸೇವೆಯೊಂದಿಗೆ ನಿಯತ್ತಿಗೊಳಿಸಬೇಕೆಂದು ಶಿಕ್ಷಕರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ 80,000 ಕ್ಕಿಂತ ಹೆಚ್ಚು ಪದವಿ ವಿದ್ಯಾರ್ಹತೆ ಹೊಂದಿದ ಶಿಕ್ಷಕರಿದು 20 -25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅರ್ಹ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇಕೆಂದು ಆಗ್ರಹಿಸಲಾಗಿದೆ. ಹೊಸಬರ ನೇಮಕಾತಿಗೆ ಮೊದಲೇ ಸೇವಾನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇಕೆಂದು ಒತ್ತಾಯಿಸಲಾಗಿದೆ.