ಉಡುಪಿ: ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಪೋಲೀಸರು ಬಂಧಿಸಿದ್ದಾರೆ. ಈ ವೇಳೆ ಯುವತಿಯೊಬ್ಬಳನ್ನು ರಕ್ಷಿಸಲಾಗಿದೆ.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿಯಾಗಿರುವ ಬಂಧಿತ ಶಿಕ್ಷಕಿ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಕಿ ತನ್ನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ವೇಶ್ಯಾವಾಟಿಕೆ ನಡೆಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕಿಯನ್ನು ಬಂಧಿಸಿದ್ದು, ಯುವತಿಯನ್ನು ರಕ್ಷಿಸಿ ಮುಂದಿನ ಕ್ರಮ ಜರುಗಿಸಲಾಗಿದೆ.