ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಹಗರಣ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ನಡೆದ ಹಿನ್ನೆಲೆಯಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಬಿಗಿ ಭದ್ರತೆಯೊಂದಿಗೆ ನಡೆಸಲು ಸರ್ಕಾರ ಮುಂದಾಗಿದೆ.
15,000 ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಯಾವುದೇ ಅಕ್ರಮ, ಅವ್ಯವಹಾರಗಳಿಗೆ ಅವಕಾಶವಾಗದಂತೆ ತಡೆಯುವ ಉದ್ದೇಶದಿಂದ ಪ್ರತಿ ಜಿಲ್ಲೆಗಳಲ್ಲಿಯೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇತೃತ್ವದ ಸಮಿತಿ ರಚಿಸಲಾಗುವುದು. ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಬಿಗಿ ಭದ್ರತೆಯಲ್ಲಿ ನಡೆಸಲಾಗುವುದು. ಯಾವುದೇ ಅಕ್ರಮ ನಡೆಸಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.