ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ದೈಹಿಕ ಶಿಕ್ಷಕ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
22 ವರ್ಷದ ದೈಹಿಕ ಶಿಕ್ಷಕ ದಾದಾಪೀರ್ ಕೃತ್ಯವೆಸಗಿದ ಆರೋಪಿ ಎನ್ನಲಾಗಿದೆ. ಬಾಲಕಿಯನ್ನು ನಂಬಿಸಿ ದೇವರಾಯನದುರ್ಗ ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದು, ನಂತರ ತುಮಕೂರಿಗೆ ಕರೆದುಕೊಂಡು ಹೋಗಿದ್ದಾನೆ. ತುಮಕೂರಿನ ಲಾಡ್ಜ್ ವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. 10 ದಿನದ ನಂತರ ಮತ್ತೆ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಗ್ಗೆ ಬಾಯಿ ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಸಂತ್ರಸ್ತೆಯ ದೂರು ಆಧರಿಸಿ ದೈಹಿಕ ಶಿಕ್ಷಕನ ಬಂಧಿಸಲಾಗಿದ್ದು, ದಾಬಸ್ ಪೇಟೆ ಠಾಣೆ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.