alex Certify ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 60,000 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಸಿಎಂಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 60,000 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಸಿಎಂಗೆ ಮನವಿ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ತರಗತಿಗಳು ಮೇ 29 ರಿಂದ ಆರಂಭವಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸಿಎಂಗೆ ಮನವಿ ಸಲ್ಲಿಸಿದ್ದು, ಪ್ರಸಕ್ತ ಸಾಲಿನ ತರಗತಿಗಳು ಮೇ 29 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60,000ಕ್ಕೂ ಹೆಚ್ಚು ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು ಎಂದು ಕೋರಲಾಗಿದೆ.

ಪ್ರಾಥಮಿಕ ಶಾಲೆಗಳಲ್ಲಿ 50,000, ಪ್ರೌಢಶಾಲೆಗಳಲ್ಲಿ 10,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕಳೆದ ವರ್ಷದಂತೆ ಈ ವರ್ಷವೂ ತರಗತಿಗಳು ಆರಂಭವಾಗುವ ಮೊದಲೇ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೈಕ್ಷಣಿಕ ಚಟುವಟಿಕೆಗಳು ಸುಗಮವಾಗಿ ನಡೆಯಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...