ಮಡಿಕೇರಿ: ಪ್ರಸಕ್ತ(2021-22) ಸಾಲಿನಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕೆ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ 6 ಪ್ರೌಢ ಶಾಲಾ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಮೂಲಕ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ವಿಶೇಷ ಬಿಇಡಿ ವಿದ್ಯಾರ್ಹತೆ ಹೊಂದಿ ಆರ್ಸಿಐ ನಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂನ್ 30 ರಂದು ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಹಾಗೂ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ: 9448999344, 9448999400 ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಹಾಗೂ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ ಅವರು ತಿಳಿಸಿದ್ದಾರೆ.