
ಬೆಂಗಳೂರು: 2014-15 ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಹಾಲಿ ಮತ್ತು ಮಾಜಿ ಅಧಿಕಾರಿಗಳನ್ನು ಸಿಐಡಿ ಬಂಧಿಸಿದೆ.
ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ ಗೀತಾ, ಪಠ್ಯ ಪುಸ್ತಕ ಸಮಿತಿ ನಿರ್ದೇಶಕ ಮಾದೇಗೌಡ, ನಿವೃತ್ತ ಜಂಟಿ ನಿರ್ದೇಶಕರಾದ ಜಿ.ಆರ್. ಬಸವರಾಜು, ಕೆ. ರತ್ನಯ್ಯ, ಶಿವಕುಮಾರ್ ಬಂಧಿತರು ಎಂದು ಹೇಳಲಾಗಿದೆ.
ಬಂಧಿತ ಆರೋಪಿಗಳನ್ನು ಸಿಐಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗೆ ವಶಕ್ಕೆ ನೀಡುವಂತೆ ಮನವಿ ಮಾಡಿದೆ. ಅಕ್ಟೋಬರ್ 1 ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.