ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಅಸಮತೋಲನವನ್ನು ಸರಿಪಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಅಸಮತೋಲನವನ್ನು ಶೀಘ್ರವೇ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ. 15 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹೊಸ ಶಿಕ್ಷಕರ ನೇಮಕಾತಿಗಾಗಿ ಮೇನಲ್ಲಿ ಸಿಇಟಿ ನಡೆಸಲಾಗುವುದು. ಶಿಕ್ಷಕರ ಕೊರತೆಯಿರುವ ಕಡೆಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.