
ಬೆಂಗಳೂರು: ಆರರಿಂದ ಎಂಟನೇ ತರಗತಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಇನ್ನೊಂದು ತಿಂಗಳಲ್ಲಿ ಆಯ್ಕೆಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನ ತಿಮ್ಮಯ್ಯ ರಸ್ತೆಯ ಕಾರ್ಪೊರೇಷನ್ ಪ್ರಾಥಮಿಕ ಶಾಲೆಯಲ್ಲಿ ನಡೆದ ಇಂಡಿಯನ್ ಅಕಾಡೆಮಿ ಸಮೂಹ ಸಂಸ್ಥೆಗಳು ದತ್ತು ಪಡೆದ ಸರ್ಕಾರಿ ಹಾಗೂ ಬಿಬಿಎಂಪಿ ಶಾಲೆಗಳ ನವೀಕೃತ ಕಟ್ಟಡಗಳ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳ ಆರರಿಂದ ಎಂಟನೇ ತರಗತಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿಗೆ ಸಿಇಟಿ ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿ ಸಿದ್ದುಪಡಿಸುತ್ತಿದ್ದು, ಇನ್ನೊಂದು ತಿಂಗಳಲ್ಲಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.