
ಬೆಂಗಳೂರು: 2,500 ಪ್ರೌಢಶಾಲೆ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಆರ್ಥಿಕ ಇಲಾಖೆ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಹಸಿರು ನಿಶಾನೆ ತೋರಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ದಿನಗಳಲ್ಲಿ ಆರಂಭಿಸಲಾಗುವುದು. ಪ್ರಸ್ತುತ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ನಲ್ಲಿ ಪೂರ್ಣವಾಗಲಿದೆ ಎಂದು ತಿಳಿಸಿದ್ದಾರೆ.