ಬೆಂಗಳೂರು: ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಮೊದಲು ಪರಿಷ್ಕೃತ ಆದೇಶ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಟಿಇಟಿ ಪಾಸಾಗಿರುವ ಬಯೋಟೆಕ್ನಾಲಜಿ ಪದವೀಧರರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಿಇಟಿ ಪರೀಕ್ಷೆಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ.
ಆರರಿಂದ ಎಂಟನೇ ತರಗತಿ ಶಿಕ್ಷಕರ ನೇಮಕಾತಿಗೆ ಸರ್ಕಾರ ರೂಪಿಸಿದ ವೃಂದ ಮತ್ತು ನೇಮಕಾತಿ ಪ್ರಕಟಣೆಯಲ್ಲಿ ಬಯೋಟೆಕ್ನಾಲಜಿ ಪದವಿ ಪಡೆದ ಬಿಎಡ್, ಡಿಎಡ್ ಅಭ್ಯರ್ಥಿಗಳನ್ನು ಕಡೆಗಣಿಸಲಾಗಿತ್ತು. ಇದರಿಂದಾಗಿ ಬಯೋಟೆಕ್ನಾಲಜಿಯಲ್ಲಿ ಪದವಿ ಪಡೆದ ಸಾವಿರಾರು ಅಭ್ಯರ್ಥಿಗಳು ಟಿಇಟಿ ಪಾಸಾಗಿದ್ದರೂ ಶಿಕ್ಷಕರ ನೇಮಕಾತಿ ವಂಚಿತರಾಗುವಂತಾಗಿತ್ತು. ಈಗ ನಿಯಮಗಳನ್ನು ಬದಲಿಸಿ ಪರಿಷ್ಕೃತ ಆದೇಶ ಹೊರಡಿಸುವುದಾಗಿ ಸಚಿವರು ಹೇಳಿರುವುದರಿಂದ ಅವರಿಗೆ ಅವಕಾಶ ಸಿಗಲಿದೆ ಎನ್ನಲಾಗಿದೆ.