alex Certify ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಎರಡನೇ ಸುತ್ತಿನಲ್ಲಿ ಮಂಜೂರಾದ 8,000 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತಾಲೂಕುವಾರು ಹುದ್ದೆಗಳ ಹಂಚಿಕೆ ಪಟ್ಟಿ ಬಿಡುಗಡೆ ಮಾಡಿದೆ.

ಮುಂದಿನ ಒಂದು ವಾರದಲ್ಲಿ ಈ ಹುದ್ದೆಗಳ ನೇಮಕಾತಿ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮೊದಲ ಸುತ್ತಿನಲ್ಲಿ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಈಗ ಮಂಜೂರಾದ 8000 ಹುದ್ದೆಗಳು ಸೇರಿದಂತೆ ಒಟ್ಟು 35,000 ಅತಿಥಿ ಶಿಕ್ಷಕರ ಹುದ್ದೆಗಳು ಇವೆ.

ಈ ಬಾರಿ ಶಿಕ್ಷಕರ ವರ್ಗಾವಣೆಯಿಂದ ಖಾಲಿಯಾದ ಹುದ್ದೆಗಳಿಗೆ ಎರಡನೇ ಸುತ್ತಿನಲ್ಲಿ ಮಂಜೂರಾದ ಅತಿಥಿ ಶಿಕ್ಷಕರನ್ನು ಷರತ್ತುಗಳ ಅನ್ವಯ ನೇಮಕ ಮಾಡಿ ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆ ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...