ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, 2,500 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಸಹ ಶಿಕ್ಷಕರ 2200 ಹುದ್ದೆಗಳು, ದೈಹಿಕ ಶಿಕ್ಷಕರ 200 ಹುದ್ದೆಗಳು, ವಿಶೇಷ ಶಿಕ್ಷಕರ 100 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ.