
ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಯನ್ನು ಇಂದು ರಾತ್ರಿ ಪ್ರಕಟಿಸಲಾಗುವುದು.
ಆರರಿಂದ ಎಂಟನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ರಾತ್ರಿ 8 ಗಂಟೆಯ ನಂತರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.