alex Certify 15 ಸಾವಿರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಮಾ. 4 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

15 ಸಾವಿರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಮಾ. 4 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ. ಆರರಿಂದ ಎಂಟನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ವಿವಾಹ ಮತ್ತು ಜಾತಿ ಆದಾಯ ಪ್ರಮಾಣ ಪತ್ರದ ಸಮಸ್ಯೆಯಿಂದಾಗಿ ತಡೆಹಿಡಿಯಲಾಗಿದ್ದ ಶಿಕ್ಷಕರ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ಕೋರ್ಟ್ ತೀರ್ಪಿನ ಪ್ರಕಾರ ಪರಿಷ್ಕರಿಸಿ ಪ್ರಕಟಿಸಿದೆ. 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಮಾರ್ಚ್ 4 ರವರೆಗೆ ಅವಕಾಶ ನೀಡಲಾಗಿದೆ.

ಅಗತ್ಯ ದಾಖಲೆಗಳೊಂದಿಗೆ ಡಿಡಿಪಿಐ ಇಲ್ಲವೇ ನೇಮಕಾತಿ ಪ್ರಾಧಿಕಾರದ ಕಚೇರಿಯಲ್ಲಿ ಖುದ್ದಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ನವೆಂಬರ್ ನಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆದರೆ, 1:2 ಪರಿಶೀಲನಾ ಪಟ್ಟಿಯಲ್ಲಿನ ಅಭ್ಯರ್ಥಿಗಳ ಪ್ರಮಾಣ ಪತ್ರದ ಆಧಾರದ ಮೇಲೆ ಮೀಸಲಾತಿಯಿಂದ ಸಾಮಾನ್ಯ ವರ್ಗಕ್ಕೆ ಶಿಕ್ಷಣ ಇಲಾಖೆ ಪರಿಗಣಿಸಿದ್ದು, 1:1 ಅನುಪಾತದ ತಾತ್ಕಾಲಿಕ ಪಟ್ಟಿಯಿಂದ ಹೊರಗುಳಿದವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಲಾಗಿದೆ. 1:1 ಅನುಪಾತಕ್ಕೆ 13,351 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಹುದ್ದೆಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...