ಬೆಂಗಳೂರು: ಆರರಿಂದ ಎಂಟನೇ ತರಗತಿಗೆ ಬೋಧಿಸುವ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ನವೆಂಬರ್ 23ರ ವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಈ ಅವಧಿಯನ್ನು ವಿಸ್ತರಿಸಲಾಗಿದೆ. ಜಿಲ್ಲಾ ಉಪನಿರ್ದೇಶಕರು ಮತ್ತು ನೇಮಕ ಪ್ರಾಧಿಕಾರಕ್ಕೆ ಖುದ್ದಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಶಿಕ್ಷಣ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.