
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರವೇ 1:2 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 1:2 ಅನುಪಾತದ ಆಧಾರದಲ್ಲಿ ಪ್ರಕಟಿಸಲಾಗುವುದು ಎಂದರು.
ಉತ್ತೀರ್ಣರಾದ ಅಭ್ಯರ್ಥಿಗಳ ಫಲಿತಾಂಶ, ಶಿಕ್ಷಕರ ಶಿಕ್ಷಣ ಮತ್ತು ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶದಲ್ಲಿ ನಿಗದಿತ ಅಂಕಗಳನ್ನು ಪರಿಗಣಿಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುವುದು. ನಂತರ ದಾಖಲೆಗಳ ಪರಿಶೀಲನೆ ನಡೆಯಲಿದ್ದು, ಎಲ್ಲಾ ಅರ್ಹತೆ ಪರಿಶೀಲಿಸಿ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ.