ಬೆಂಗಳೂರು: ಶೀಘ್ರವೇ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿ ಸೂಚಿಸಿರುವ ಪ್ರಕಾರ 800 ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಸೇರಿದಂತೆ 15000 ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ 5000 ಹುದ್ದೆಗಳ ಭರ್ತಿಗೆ ಈಗಾಗಲೇ ಮಂಜೂರಾತಿ ದೊರೆತಿದ್ದು, ಇದನ್ನು ಹೊರತುಪಡಿಸಿ ಇನ್ನೂ 15,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.