ಉಡುಪಿ: ರಾಜ್ಯದಲ್ಲಿ 40,000 ಶಿಕ್ಷಕರ ಕೊರತೆ ಇದೆ. ಇವರಲ್ಲಿ 13500 ಶಿಕ್ಷಕರಿಗೆ ಶೀಘ್ರವೇ ನೇಮಕಾತಿ ಪತ್ರ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬ್ರಹ್ಮಗಿರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಅವರು ಮಾತನಾಡಿ, ವಾರದಲ್ಲಿ ಹೊರಬೀಳುವ ಹೈಕೋರ್ಟ್ ತೀರ್ಪಿಗೆ ಅನುಗುಣವಾಗಿ 13500 ಶಿಕ್ಷಕರಿಗೆ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
32 ಸಾವಿರ ಶಿಕ್ಷಕರ ಕೋರಿಕೆ ವರ್ಗಾವಣೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 10,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ ಅತಿಥಿ ಶಿಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.