
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
2022 -23 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 1000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಸರ್ಕಾರಿ ಪ್ರೌಢಶಾಲೆಗಳಿಗೆ 1000 ಅತಿಥಿ ಶಿಕ್ಷಕರ ನೇಮಕಾತಿಗೆ ಈ ಮೊದಲು ಅನುಮತಿ ನೀಡಲಾಗಿತ್ತು. ಆದರೆ, ಅತಿಥಿ ಶಿಕ್ಷಕರ ಹುದ್ದೆಗಳ ಅವಶ್ಯಕತೆ ಕಂಡುಬಂದಿಲ್ಲ. ಹೀಗಾಗಿ ಪ್ರಾಥಮಿಕ ಶಾಲೆಗಳಿಗೆ 1 ಸಾವಿರ ಅತಿಥಿ ಶಿಕ್ಷಕರನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.