ಬೆಂಗಳೂರು: ರಾಜ್ಯದ ಪ್ರಾಥಮಿಕ, ಪ್ರೌಢಶಲೆಗಳಲ್ಲಿ 23 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಪ್ರಾಥಮಿಕ ಶಾಲೆಗೆ 18,000 ಮತ್ತು ಪ್ರೌಢಶಾಲೆಗೆ 5,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ನೇಮಕವಾಗುವ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕರಿಗೆ 7500 ರೂಪಾಯಿ, ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ 8000 ರೂಪಾಯಿ ಸಂಭಾವನೆ ನಿಗದಿಪಡಿಸಲಾಗಿದೆ. ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಲಾಗಿದೆ.