ಬೆಂಗಳೂರು: ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ನಡೆಸಲಾಗುತ್ತದೆ.
ರಾಜ್ಯ ಸರ್ಕಾರ ಜನವರಿ ಮತ್ತು ಜೂನ್ ನಲ್ಲಿ ವರ್ಷಕ್ಕೆ ಎರಡು ಬಾರಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. 2022 -23 ನೇ ಸಾಲಿನಿಂದ ವರ್ಷಕ್ಕೆ ಎರಡು ಬಾರಿ ಟಿಇಟಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ಟಿಇಟಿ ಪರೀಕ್ಷೆ ಕಷ್ಟವಾಗಿರುವುದರಿಂದ ಅರ್ಹತೆ ಪಡೆಯುವ ಅಭ್ಯರ್ಥಿಗಳ ಸಂಖ್ಯೆ ಶೇಕಡ 20 ಕ್ಕಿಂತ ಕಡಿಮೆ ಇದೆ. ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕವಾಗಲು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದೆ. ಬಿಎಡ್ ಮತ್ತು ಡಿಎಡ್ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಶಿಕ್ಷಕ ವೃತ್ತಿ ಕೈಗೊಳ್ಳಲು ಕಡ್ಡಾಯವಾಗಿ ಟಿಇಟಿ ಪಾಸಾಗಿ ಅರ್ಹತೆ ಪಡೆಯಬೇಕಿದೆ. ಈ ಪರೀಕ್ಷೆಯನ್ನು ಇನ್ನುಮುಂದೆ ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು.