ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ರಾಜ್ಯದ ಮಾಧ್ಯಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು, ಪದವೀಧರರು, ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಸಭೆ ನಡೆಸಿದ್ದಾರೆ.
ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ವೃತ್ತಿ ಶಿಕ್ಷಕರು ಮತ್ತು ಶಿಕ್ಷಕರ ಸಮಸ್ಯೆಗಳ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ವಿಲೀನವಾಗದೆ ಬಾಕಿ ಉಳಿದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 28 ಬೋಧಕೇತರ ಸಿಬ್ಬಂದಿ, 11 ಭಾಷಾ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು ಇವರ ಸೇವೆ ವಿಲೀನಗೊಳಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಇಲಾಖೆಯಲ್ಲಿ ವಿಲೀನವಾಗಿ ನಿವೃತ್ತಿ ಅಂಚಿನಲ್ಲಿರುವ 95 ಜೆಒಸಿ ಉಪನ್ಯಾಸಕರಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಒಂದು ಸಲ ಬಿಎಡ್ ವಿನಾಯಿತಿ ನೀಡಲಾಗುವುದು ಎಂದು ಹೇಳಲಾಗಿದೆ.