ಬೆಂಗಳೂರು: ಅನುದಾನಿತ ಪ್ರೌಢಶಾಲೆಗಳ 1924 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಖಾಲಿ ಹುದ್ದೆಗಳ ಭರ್ತಿ ಮಾಡಲು ಕ್ರಮಕೈಗೊಂಡಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿಧಾನಪರಿಷತ್ ನಲ್ಲಿ ಸಚಿವರು ತಿಳಿಸಿದ್ದಾರೆ.
ಬಿಜೆಪಿ ಸದಸ್ಯರಾದ ಶಶೀಲ್ ನಮೋಶಿ, ಪುಟ್ಟಣ್ಣ ಹಾಗೂ ಅರುಣ ಶಹಾಪುರ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿ, 2015 ರ ಡಿಸೆಂಬರ್ ಅಂತ್ಯದವರೆಗೆ ಅನುದಾನಿತ ಪ್ರೌಢಶಾಲೆಗಳಲ್ಲಿ 3689 ಹುದ್ದೆಗಳು ಖಾಲಿಯಿದ್ದು, ಅವುಗಳಲ್ಲಿ 3633 ಹುದ್ದೆಗಳ ಭರ್ತಿಗೆ ಒಪ್ಪಿಗೆ ನೀಡಲಾಗಿದ್ದು, 1452 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 2181 ಹುದ್ದೆಗಳ ಭರ್ತಿ ಮಾಡಬೇಕಿದೆ. ಆರ್ಥಿಕ ಮಿತವ್ಯಯದ ಕಾರಣ 1924 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.