ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಿದ ನಂತರ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಬೇಕೆಂದು ಒತ್ತಾಯಿಸಲಾಗಿದೆ.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಪ್ರಕ್ರಿಯೆ ಇಲ್ಲದೆ ಶಿಕ್ಷೆ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ವರ್ಗಾವಣೆ ಮಾಡುವುದರಿಂದ ಸಾಕಷ್ಟು ಶಿಕ್ಷಕರು ಬಡ್ತಿಯಿಂದ ವಂಚಿತರಾಗುತ್ತಾರೆ. ಹೀಗಾಗಿ ಶಿಕ್ಷಣ ಇಲಾಖೆ ಕೂಡಲೇ ಈ ಸಮಸ್ಯೆ ಬಗ್ಗೆ ಹರಿಸಬೇಕೆಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಂಬುಲಿಂಗನಗೌಡ ಪಾಟೀಲ ಒತ್ತಾಯಿಸಿದ್ದಾರೆ.
ಬಡ್ತಿ ಪ್ರಕ್ರಿಯೆ ಸ್ಥಗಿತಗೊಳಿಸಲು ಹೊರಡಿಸಿದ್ದ ಪತ್ರವನ್ನು ಮುಖ್ಯ ಕಾರ್ಯದರ್ಶಿ ಹಿಂತೆಗೆದುಕೊಂಡಿದ್ದಾರೆ. ಆದರೆ, ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ಭರ್ತಿ ಪ್ರಕ್ರಿಯೆ ಕೈಗೊಳ್ಳದೆ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ವರ್ಗಾವಣೆ ಮಾಡಲು ಮುಂದಾಗಿರುವುದು ಸರಿಯಲ್ಲ. ಮೊದಲು ಬಡ್ತಿ ಪ್ರಕ್ರಿಯೆ ನಡೆಸಿ ಬಳಿಕ ಹೆಚ್ಚುವರಿ ಶಿಕ್ಷಕರ ಗುರುತಿಸಿ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.