alex Certify ಶಿಕ್ಷಕರಾಗುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 22 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರಾಗುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 22 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ 22000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

2022 -23ನೇ ಸಾಲಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಸಂಬಂಧಿಸಿದ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ಮೂಲಕವೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕಿದ್ದು, ಅತಿಥಿ ಶಿಕ್ಷಕರಿಗೆ 7500 ರೂ. ಗೌರವ ಸಂಭಾವನೆ ನಿಗದಿಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...