ಬೆಂಗಳೂರು: ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಗುರುಪಾದ ಸಂಗನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ, 2016ರವರೆಗೆ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. 2016 -20ರ ವರೆಗಿನ ಹುದ್ದೆಗಳ ಭರ್ತಿ ಮಾಡುವ ಕುರಿತು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದನ್ನು 2023ರ ವರೆಗೆ ವಿಸ್ತರಿಸಿ ಶೀಘ್ರವೇ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅನುದಾನಿತ ಶಾಲೆಗಳಲ್ಲಿರುವ ಬೋಧಕೇತರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಬೋಧಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.