ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಸಿಬ್ಬಂದಿಗೆ ಶಿಕ್ಷಕರ ಕಲ್ಯಾಣ ನಿಧಿಯಿಂದ ನೆರವು ನೀಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಸಂಕಷ್ಟದಲ್ಲಿರುವ ಶಿಕ್ಷಕರು, ಉಪನ್ಯಾಸಕರು ಮತ್ತು ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ನೀಡಲಾಗುವುದು.
ಇದಕ್ಕಾಗಿ ಎಸ್ಎಸ್ಎಲ್ಸಿ, ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳು ಮತ್ತು ಟಿಇಟಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ ಬಳಸಿಕೊಳ್ಳಲಾಗುವುದು. ಶಿಕ್ಷಕರ ಕಲ್ಯಾಣ ನಿಧಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಪದವಿಪೂರ್ವ ಶಿಕ್ಷಣ ಇಲಾಖೆಗೆ ನೀಡಿರುವ ಅನುದಾನದಲ್ಲಿ ಉಳಿದ ಅನುದಾನ ಬಳಸಿಕೊಂಡು ವಿಶೇಷ ಪ್ಯಾಕೇಜ್ ನೀಡುವ ಚಿಂತನೆ ನಡೆದಿದೆ.
ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ಖಾಸಗಿ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಮತ್ತು ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂಬ ಒತ್ತಾಯ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮಕೈಗೊಂಡಿದೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿವಿಧ ಅನುದಾನ ಬಳಸಿಕೊಂಡು ಶಿಕ್ಷಕರ ಕಲ್ಯಾಣ ನಿಧಿಯಿಂದ ಸಂಕಷ್ಟದಲ್ಲಿರುವ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗೆ ನೀಡಲಾಗುವುದು ಎಂದು ಹೇಳಲಾಗಿದೆ.