
ಮೈಸೂರು: ಶಿಕ್ಷಕಿಯರಿಗೆ ಸಹ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.
ಮೈಸೂರು ಜಿಲ್ಲೆಯ ಶ್ರೀರಾಂಪುರದ ಖಾಸಗಿ ಶಾಲೆಯ ಶಿಕ್ಷಕನ ವಿರುದ್ಧ ಶಿಕ್ಷಕಿಯರು ಆರೋಪ ಮಾಡಿದ್ದು, ವಿಷಯ ತಿಳಿಯುತ್ತಿದ್ದಂತೆ ಶಿಕ್ಷಕಿಯರ ಪೋಷಕರು ಶಾಲೆಗೆ ಮುತ್ತಿಗೆ ಹಾಕಿ ಸಹ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಶ್ರೀರಾಂಪುರದ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಉಪೇಂದ್ರ ಕುಮಾರ್ ವಿರುದ್ಧ ಶಿಕ್ಷಕಿಯರು ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಿದ್ದಾರೆ. ಶಾಲಾ ಆಡಳಿತ ಮಂಡಳಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಕಿಯರ ಪೋಷಕರು ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ.