
ಯಾದಗಿರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಸಾಹೇಬ್ ಗೌಡ, ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಹನುಮಂತರಾಯ ಅವರನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಕ್ರಮ ಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ ತಾರದೇ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷ್ಯ ತೋರಿದ್ದಾರೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರನ್ನು ಅಮಾನತು ಮಾಡಲಾಗಿದೆ. ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.