ಮೈಸೂರು: ಹೆಚ್.ಡಿ. ಕೋಟೆ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಸಲ್ಲಾಪದಲ್ಲಿ ತೊಡಗಿರುವ ದೃಶ್ಯ ವಿಡಿಯೋದಲ್ಲಿ ಕಂಡು ಬಂದಿದ್ದು, ಈ ಮಾಹಿತಿ ತಿಳಿಯುತ್ತಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲೆಯ ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಮುಖ್ಯಶಿಕ್ಷಕ ಇಂತಹ ಕೃತ್ಯವೆಸಗಿರುವುದನ್ನು ವಿಡಿಯೋದಲ್ಲಿ ಗಮನಿಸಿ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ವರದಿ ನೀಡಲು ಮುಂದಾಗಿದ್ದಾರೆ. ಇನ್ನು ಶಾಲೆಯ ಆಡಳಿತ ಮಂಡಳಿಯವರು ಸಭೆ ನಡೆಸಿ ಮುಖ್ಯ ಶಿಕ್ಷಕನನ್ನು ಕೆಲಸದಿಂದ ತೆಗೆದುಹಾಕಲು ತೀರ್ಮಾನಿಸಿದ್ದಾರೆನ್ನಲಾಗಿದೆ.