alex Certify ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಚೆಲ್ಲಾಟ: ಶಿಕ್ಷಕಿಗೆ ಹೈಕೋರ್ಟ್ ತರಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಚೆಲ್ಲಾಟ: ಶಿಕ್ಷಕಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಯೊಂದಿಗೆ ಅಸಹಜ ರೀತಿಯಲ್ಲಿ ಫೋಟೋ, ವಿಡಿಯೋ ತೆಗೆಸಿಕೊಂಡ ಮುಖ್ಯ ಶಿಕ್ಷಕಿಗೆ ನಡೆಯಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಕೆಲಸ ಶಿಕ್ಷಕಿಗೆ ಅನಪೇಕ್ಷಿತ ಎಂದು ಹೇಳಿದ ಹೈಕೋರ್ಟ್ ಪೋಕ್ಸೋ ಪ್ರಕರಣ ರದ್ದು ಕೋರಿದ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಶಿಕ್ಷಕಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಮೌಖಿಕವಾಗಿ ಹೈಕೋರ್ಟ್ ನಿರಾಕರಿಸಿದೆ. ಆರೋಪಗಳನ್ನು ಕೈಬಿಡುವಂತೆ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಶಿಕ್ಷಕಿಗೆ ತಿಳಿಸಿದೆ.

ಪ್ರಕರಣದ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣೆ ಮತ್ತು ಕೆಂಚಾರ್ಲಹಳ್ಳಿ ಪೋಲಿಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ರದ್ದು ಮಾಡುವಂತೆ ಕೋರಿ ಮುಖ್ಯ ಶಿಕ್ಷಕಿ ಪುಷ್ಪಲತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ನಡೆದಿದೆ.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಫೋಟೋಗಳು ಅಸಹಜವಾಗಿಯೇ ಇವೆ. ಆದರೆ, ಶಿಕ್ಷಕಿ ಮತ್ತು ವಿದ್ಯಾರ್ಥಿ ನಡುವೆ ತಾಯಿ ಮಗನ ಸಂಬಂಧವಿದೆ. ಆಕೆ ಕೇರ್ ಟೇಕಿಂಗ್ ಶಿಕ್ಷಕಿ ಎಂದು ಹೇಳಿದ್ದಾರೆ. ಇದಕ್ಕೆ ಗರಂ ಆದ ನ್ಯಾಯಮೂರ್ತಿಗಳು ಅವು ಕೇರ್ ಟೇಕಿಂಗ್ ಚಿತ್ರಗಳಾಗಿವೆಯೇ ಎಂದು ಪ್ರಶ್ನಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...