ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
ನರಸಿಂಹ ಮೂರ್ತಿ (59) ಮೃತ ಶಿಕ್ಷಕ. ಜಡಗನಹಳ್ಳಿ ಪ್ರೌಢ ಶಾಲೆಯ ಶಿಕ್ಷಕರಾಗಿದ್ದರು. ಜನವರಿ 15ರಂದು ಸೇವೆಯಿಂದ ನಿವೃತ್ತಿಯಾಗಲಿದ್ದರು.
10 ಕೋಟಿ ಮೌಲ್ಯದ ಜಮೀನನ್ನು ಕಾಂಗ್ರೆಸ್ ಮುಖಂಡ ಸತೀಶ್ ಎಂಬುವವರು ಖರೀದಿಸುವುದಾಗಿ ಹೇಳಿ 10 ಲಕ್ಷ ಹಣ ಕೊಟ್ಟು ಅಗ್ರಿಮೆಂಟ್ ಮಾಡಿಸಿಕೊಂಡಿದ್ದರು. ಬಳಿಕ ಉಳಿದ ಹಣ ಕೊಡದೇ ಸತಾಯಿಸಿ ಜಮೀನು ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಣ ಕೇಳಲು ಹೋದಾಗ ಬೆದರಿಕೆ ಹಾಕಿ ಧಮ್ಕಿ ಹಾಕಿ ಕಳುಹಿಸಿದ್ದಾರೆ. ಇದರಿಂದ ಮನನೊಂದ ನರಸಿಂಹ ಮೂರ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.