ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. 72 ಸಾವಿರ ಶಿಕ್ಷಕರ ವರ್ಗಾವಣೆ ಅರ್ಜಿಗಳನ್ನು ಶಿಕ್ಷಕ ಮಿತ್ರ ಆಪ್ ಮೂಲಕವೇ ನಿರ್ವಹಿಸಲಾಗುವುದು. ಸಂಪೂರ್ಣ ಆನ್ಲೈನ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತದೆ. ಈ ಬಾರಿ ಭೌತಿಕ ಕೌನ್ಸಿಲಿಂಗ್ ಇರುವುದಿಲ್ಲ.
ರಾಜ್ಯದ ಶಿಕ್ಷಕರ ಮನವಿಯಂತೆ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರಿವಾಜ್ಞೆ ಮೂಲಕ ಶಿಕ್ಷಕರ ವರ್ಗಾವಣೆಗೆ ಕ್ರಮಕೈಗೊಳ್ಳಲಾಗಿದೆ. ಸದ್ಯ ರಾಜ್ಯದಲ್ಲಿ ಜನತಾ ಕರ್ಫ್ಯೂ ಇರುವುದರಿಂದ ಆನ್ಲೈನ್ ಮೂಲಕ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಶೀಘ್ರವೇ ಶಾಲಾ ಶಿಕ್ಷಕರ ವರ್ಗಾವಣೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.