ಬೆಂಗಳೂರು: ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ನಾಳೆ ಚಾಲನೆ ಸಿಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಮೂರು ವರ್ಷಗಳಿಂದ ಕಾಯುತ್ತಿದ್ದ ಶಿಕ್ಷಕರ ವರ್ಗಾವಣೆಗೆ ಜೂನ್ 30 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಅಧಿಸೂಚನೆ ಹೊರಡಿಸಿದ ದಿನದಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ವಿಧಾನಮಂಡಲದಲ್ಲಿ ಅನುಮೋದನೆ ಪಡೆದುಕೊಂಡು ಕಾಯ್ದೆ ಸೂಚಿಸಿದ ಸಂದರ್ಭದಲ್ಲಿ ಕೆಲವು ಶಿಕ್ಷಕರು ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು. ನಂತರ ಸಂಪುಟದ ಅನುಮೋದನೆಯೊಂದಿge ರಾಜ್ಯಪಾಲರ ಒಪ್ಪಿಗೆ ನಂತರ ಸುಗ್ರೀವಾಜ್ಞೆ ಹೊರಡಿಸಿದ್ದು, ಜೂನ್ 30 ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.