
ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ.
ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಶಿಕ್ಷಕಿ ಕೆ.ಬಿ. ಜಯಮ್ಮ, ಮಠದ ಕುರುಬರಹಟ್ಟಿ ಶಾಲಾ ಶಿಕ್ಷಕಿ ಕೆ. ಗಿರಿಜಮ್ಮ, ತೋಪುರ ಮಾಳಿಗೆ ಶಾಲೆ ಶಿಕ್ಷಕಿ ಎಸ್. ರೂಪಾ ಅಮಾನತುಗೊಂಡವರು. ಈ ಮೂವರನ್ನು ಮತಗಟ್ಟೆ ಅಧಿಕಾರಿಗಳಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ, ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.