
ತುಮಕೂರು: 4, 5ನೇ ತರಗತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ ಮಂಜುನಾಥ ಅವರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ ನಟರಾಜ ಅವರನ್ನು ಕೂಡ ಸಸ್ಪೆಂಡ್ ಮಾಡಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬೋರನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿತ್ತು. ಶಿಕ್ಷಕರನ್ನು ಅಮಾನತು ಮಾಡಿ ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ಆದೇಶ ಹೊರಡಿಸಿದ್ದಾರೆ. ಆರೋಪಿ ಶಿಕ್ಷಕ ಮಂಜುನಾಥನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.