ಶಿವಮೊಗ್ಗ: ನಗರದ ಗೋಪಾಳದ ಖಾಸಗಿ ಶಾಲೆಯಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ.
ಖಾಸಗಿ ಶಾಲೆಯ ಮುಖ್ಯಶಿಕ್ಷಕಿ ಮಧ್ಯಾಹ್ನದ ಊಟದ ವೇಳೆ ನಮಾಜ್ ಗೆ ಅವಕಾಶ ಮಾಡಿಕೊಟ್ಟಿದ್ದರು. ಶುಕ್ರವಾರ ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್ ಮಾಡಿದ ವಿಡಿಯೋ ವೈರಲ್ ಆಗಿತ್ತು. ಶಿಕ್ಷಣ ಇಲಾಖೆಗೆ ದೂರುಗಳು ಸಲ್ಲಿಕೆಯಾಗಿದ್ದವು. ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡಿದ್ದು, ಇಷ್ಟರೊಳಗೆ ಶಾಲೆಯ ಆಡಳಿತ ಮಂಡಳಿಯಿಂದ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಶಾಲೆಯ ಆಡಳಿತ ಮಂಡಳಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿದೆ. ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ.