ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ ನೀಡಲಾಗಿದೆ. ತಾಂತ್ರಿಕ ಕಾರಣದಿಂದಾಗಿ ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದಂತಹ ಶಿಕ್ಷಕರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ ವರ್ಗಾವಣೆಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆದಿದೆ. ತಾಂತ್ರಿಕ ಸಮಸ್ಯೆಯ ಕಾರಣ ಅನೇಕ ಶಿಕ್ಷಕರು ಸಲ್ಲಿಸಿದ ಅರ್ಜಿ ಸ್ವೀಕೃತವಾಗಿಲ್ಲ. ಶಿಕ್ಷಕರ ಅರ್ಜಿ ತಿರಸ್ಕರಿಸಲಾಗಿದೆ ಎಂದು ಹೇಳಲಾಗಿದ್ದು, ಈ ಕಾರಣದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ತಾಂತ್ರಿಕ ತಂಡದೊಂದಿಗೆ ಚರ್ಚೆ ನಡೆಸಿದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಲಾಗಿದೆ.