ಬೆಂಗಳೂರು: ವಿವಿಧ ಕಾರಣಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ. ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ ಸುಮಾರು 72 ಸಾವಿರ ಶಿಕ್ಷಕರು ಕೌನ್ಸೆಲಿಂಗ್ ಗಾಗಿ ಕಾಯುತ್ತಿದ್ದಾರೆ. ಈಗಾಗಲೇ ಶಿಕ್ಷಕರ ವರ್ಗಾವಣೆ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಸರ್ಕಾರ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾನೂನು ತೊಡಕು ನಿವಾರಿಸಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭಿಸುವುದಾಗಿ ಹೇಳಿದ್ದಾರೆ. ಶಿಕ್ಷಕರ ವರ್ಗಾವಣೆ ವಿವಿಧ ಕಾರಣಗಳಿಂದ ವಿಳಂಬವಾಗುತ್ತಿದೆ. ಕೋರ್ಟ್ ನಲ್ಲಿ ಪ್ರಕರಣ ಇತ್ಯರ್ಥವಾಗುವ ಸಾಧ್ಯತೆಯಿದೆ. ಕಾನೂನು ತೊಡಕು ಆಗಬಾರದು ಎಂಬ ಕಾರಣಕ್ಕೆ ವರ್ಗಾವಣೆ ಪ್ರಕ್ರಿಯೆಗೆ ಅಧಿಸೂಚನೆ ಶೀಘ್ರವೇ ಹೊರಡಿಸಲಾಗುವುದು. ಕೆಲವು ಶಿಕ್ಷಕರು ಕೋರ್ಟ್ ಮೊರೆ ಹೋಗಿರುವ ಕಾರಣ ಪ್ರಕ್ರಿಯೆ ವಿಳಂಬವಾಗಿದೆ. ಕಾನೂನು ತೊಡಕು ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ವರ್ಗಾವಣೆ ಕೌನ್ಸಿಲಿಂಗ್ ಗಾಗಿ ಕಾಯುತ್ತಿರುವ 72,000 ಶಿಕ್ಷಕರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.