ಬೆಂಗಳೂರು: ಶಿಕ್ಷಕರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ. ಕೆಎಟಿ ತಡಯಾಜ್ಞೆ ತೆರವುಗೊಂಡಿದ್ದು, ಶೀಘ್ರವೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಈ ಮೂಲಕ ವರ್ಗಾವಣೆಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ಶಿಕ್ಷಕರ ವರ್ಗಾವಣೆಗೆ ಕೆಎಟಿ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವುದರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದ್ದು, ವೇಳಾಪಟ್ಟಿ ಬಿಡುಗಡೆ ಮಾಡಿ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕೆಎಟಿ ತಡೆಯಾಜ್ಞೆ ನೀಡಿದ್ದ ಕಾರಣ 2020 -21 ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಸುಮಾರು 72 ಸಾವಿರ ಶಿಕ್ಷಕರು ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.