
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರೊಂದಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆ ವ್ಯಾಪ್ತಿಗೆ ತರುವ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.
ಕಾಯ್ದೆ ವ್ಯಾಪ್ತಿಗೆ ತರುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಎರಡನೇ ತಿದ್ದುಪಡಿ ವಿಧೇಯಕ -2021ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಕುರಿತಾಗಿ ಮಾಹಿತಿ ನೀಡಿದ್ದು, 2020ರಲ್ಲಿ ವರ್ಗಾವಣೆ ಕಾಯ್ದೆಗೆ ಮೊದಲಿಗೆ ತಿದ್ದುಪಡಿ ತಂದ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಸೇರ್ಪಡೆ ಮಾಡಿರಲಿಲ್ಲ. ಈಗ ಅವರನ್ನು ಕೂಡ ಸೇರ್ಪಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಕರ ವರ್ಗಾವಣೆ ಸಂದರ್ಭದಲ್ಲಿ ಮಾರಣಾಂತಿಕ ಕಾಯಿಲೆ ಹೊಂದಿರುವವರು ಮತ್ತು ಗರ್ಭಿಣಿಯರಿಗೆ ವಿನಾಯಿತಿ ನೀಡಲಾಗುತ್ತಿತ್ತು. ಈಗ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಅನುಕೂಲವಾಗುತ್ತದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.