ಬೆಂಗಳೂರು: ಈ ವರ್ಷ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯನ್ನು ರದ್ದು ಮಾಡಲಾಗಿದೆ. ಆದರೆ, ಶಿಕ್ಷಕರ ವರ್ಗಾವಣೆಗೆ ಈ ನಿಯಮ ಅನ್ವಯವಾಗಲ್ಲ ಎಂದು ಹೇಳಲಾಗಿದೆ.
ಕೋರ್ಟ್ ನಲ್ಲಿ ಪ್ರಕರಣ ಇತ್ಯರ್ಥವಾದ ಕೂಡಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರೆಯಲಿದೆ. ಶಿಕ್ಷಕರ ವರ್ಗಾವಣೆ ಕಾಯ್ದೆಯನ್ವಯ ಖಾಲಿ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಭರ್ತಿ ಮಾಡಲಾಗುತ್ತದೆ. ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೂ ಶಿಕ್ಷಕರ ವರ್ಗಾವಣೆಗೆ ಯಾವುದೇ ಸಂಬಂಧವಿಲ್ಲವೆಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವರ್ಗಾವಣೆ ಸಂಬಂಧಿತ ಪ್ರಕರಣಗಳು ಕೋರ್ಟ್ ನಲ್ಲಿ ಇತ್ಯರ್ಥವಾಗುತ್ತಿದ್ದಂತೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರೆಸಲಾಗುವುದು.