alex Certify ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರೇ ಗಮನಿಸಿ: ಕರ್ಫ್ಯೂ ಕಾರಣ ಕೌನ್ಸೆಲಿಂಗ್ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರೇ ಗಮನಿಸಿ: ಕರ್ಫ್ಯೂ ಕಾರಣ ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಜನವರಿ 8 ರಂದು ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜ. 8 ರಂದು ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಮುಂದೂಡಲಾಗಿದೆ. ಜನವರಿ 10 ರಂದು ಬೆಳಗ್ಗೆ 10 ಗಂಟೆಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.

2020 -21 ನೇ ಸಾಲಿನ ಅಂತರಘಟಕ ವಿಭಾಗದ ಹೊರಗಿನ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಕೋರಿಕೆ ಅಥವಾ ಪರಸ್ಪರ ಸಾಮಾನ್ಯ ವರ್ಗಾವಣೆ ಗಣಕೀಕೃತ ಕೌನ್ಸೆಲಿಂಗ್ ಮೂಲಕ ಹಮ್ಮಿಕೊಳ್ಳಲು ವೇಳಾಪಟ್ಟಿ ಪ್ರಕಟಿಸಲಾಗಿತ್ತು.

ಆದ್ಯತಾ ಪಟ್ಟಿಯ ಕ್ರಮ ಸಂಖ್ಯೆ 2901 -3228 ರವರೆಗಿನ ಶಿಕ್ಷಕರಿಗೆ ಜನವರಿ 10ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕೆಜಿ ರಸ್ತೆಯ ಶಿಕ್ಷಕರ ಸದನದಲ್ಲಿ ನಡೆಯಲಿದೆ. ಉಳಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...