ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ದೀಪಾವಳಿ ಹಬ್ಬದ ವೇಳೆಯಲ್ಲೇ ಸಿಹಿ ಸುದ್ದಿ ಸಿಕ್ಕಿದೆ. ಹಬ್ಬದ ಕೊಡುಗೆಯಾಗಿ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ನವೆಂಬರ್ 17 ರಂದು ಕಡ್ಡಾಯ, ಹೆಚ್ಚುವರಿಯಾಗಿ ತಾಲ್ಲೂಕಿನಿಂದ, ಜಿಲ್ಲೆಯಿಂದ ಹೊರಗೆ ವರ್ಗಾವಣೆಯಾಗಿರುವ ಶಿಕ್ಷಕರ ಪಟ್ಟಿ ಪ್ರಕಟಿಸಲಾಗುತ್ತದೆ.
ನವೆಂಬರ್ 20 ರಿಂದ 23 ರವರೆಗೆ ಶಿಕ್ಷಕರ ಆಕ್ಷೇಪಣೆ ಪರಿಶೀಲಿಸಿ ಅಂತಿಮಗೊಳಿಸಲಾಗುವುದು. ನವೆಂಬರ್ 24 ರಿಂದ 30 ರವರೆಗೆ ಪಟ್ಟಿಯಲ್ಲಿ ಪ್ರಕಟವಾಗಿರುವ ಆಸಕ್ತ ಶಿಕ್ಷಕರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಡಿಸೆಂಬರ್ 1 ರಿಂದ 5 ರವರೆಗೆ ತಂತ್ರಾಂಶದಲ್ಲಿ ಅರ್ಜಿಗಳನ್ನು ಅಂತಿಮಗೊಳಿಸಲಾಗುವುದು.
ಡಿಸೆಂಬರ್ 14 ರಂದು ಅಂತಿಮ ಕೌನ್ಸೆಲಿಂಗ್ ಅರ್ಹತಾ ಪಟ್ಟಿ ಪ್ರಕಟಿಸಲಿದ್ದು, ಡಿಸೆಂಬರ್ 16 ಮತ್ತು 17 ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಡಿಸೆಂಬರ್ 18, 19ರಂದು ಪ್ರೌಢಶಾಲೆ ಶಿಕ್ಷಕರ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಹೇಳಲಾಗಿದೆ.
ಕಡ್ಡಾಯ, ಹೆಚ್ಚುವರಿಯಾಗಿ ತಾಲ್ಲೂಕಿನಿಂದ, ಜಿಲ್ಲೆಯಿಂದ ಹೊರಗಡೆ ವರ್ಗಾವಣೆ ಆಗಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದ ಜಿಲ್ಲೆಯ ಒಳಗೆ ಇರುವ ಖಾಲಿ ಹುದ್ದೆಗಳಿಗೆ ಅವರು ಬಯಸುವ ಅಕ್ಕಪಕ್ಕದ ತಾಲ್ಲೂಕುಗಳಲ್ಲಿ ಲಭ್ಯವಿರುವ ಹುದ್ದೆಗಳಿಗೆ ಸೀಮಿತವಾಗಿ ವರ್ಗಾವಣೆ ಮಾಡಲಾಗುವುದು ಎನ್ನಲಾಗಿದೆ.