ಬೆಂಗಳೂರು: ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆಗೆ ಸರ್ಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಡಿಸೆಂಬರ್ 28 ರಿಂದ ಫೆಬ್ರವರಿ 28 ರ ವರೆಗೆ ಎರಡು ತಿಂಗಳ ಕಾಲ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು.
ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರ ವೃಂದಕ್ಕೆ ಡಿಸೆಂಬರ್ 28ರಂದು ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿ ಪ್ರಕಟವಾಗಲಿದ್ದು, ಆಕ್ಷೇಪಣೆಗಳಿದ್ದಲ್ಲಿ ಶಿಕ್ಷಣಾಧಿಕಾರಿ ಕಚೇರಿಗೆ ಡಿಸೆಂಬರ್ 30ರೊಳಗೆ ಸಲ್ಲಿಸಬೇಕಿದೆ. ಡಿಸೆಂಬರ್ 31ರೊಳಗೆ ಶಿಕ್ಷಣಾಧಿಕಾರಿಗಳು ಆಕ್ಷೇಪಣೆ ಅಂಗೀಕರಿಸಿ ತಿರಸ್ಕಾರ ಪೂರ್ಣಗೊಳಿಸಬೇಕು. ಹೆಚ್ಚುವರಿ ಶಿಕ್ಷಕರ ಪಟ್ಟಿ ಅಥವಾ ತಿರಸ್ಕರಿಸಿದ ಪಟ್ಟಿಯನ್ನು ಜನವರಿ 2ರೊಳಗೆ ಪ್ರಕಟಿಸಬೇಕು.
ಶಿಕ್ಷಕರು ಸಮಸ್ಯೆಗಳಿದ್ದರೆ ಜನವರಿ 2ರೊಳಗೆ ಕೊಂದು ಕೊರತೆ ನಿವಾರಣೆ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಜನವರಿ 5ರೊಳಗೆ ಪರಿಶೀಲನೆ ನಡೆಸಿ ಪಟ್ಟಿ ಅಂತಿಮಗೊಳಿಸಬೇಕು. ಜನವರಿ 6 ಮತ್ತು 7 ರಂದು ವರ್ಗಾವಣೆ ತಂತ್ರಾಂಶದ ಮೂಲಕ ಆದ್ಯತೆ ಕೋರಿ ಅರ್ಜಿ, ದಾಖಲೆ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ.